ತುಮಕೂರು: ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಚ್ಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಮನ್ವಿತಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕವಾಗಿ ತಿಳಿದುಬಂದಿದೆ.
ಆದರೆ, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡದೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
🕯️ ಈ ಘಟನೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಮೂಡಿಸಿದೆ.
ವರದಿ: ನವೀನ್ ಕುಮಾರ್
Tags:#ಚಿಕ್ಕನಾಯಕನಹಳ್ಳಿ #ತುಮಕೂರು #ಹುಚ್ಚನಹಳ್ಳಿ #ಮನ್ವಿತಾ #SSLCStudent #TumakuruNews #Chikkanayakanahalli #KarnatakaNews #HandanakerePolice #BreakingNews