ಅಹಮದಾಬಾದ್: ಬೌಲರ್ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ (Virat Kohli) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ಧೂಳೀಪಟ ಮಾಡಿದ ಆರ್ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಈ ಮೂಲಕ 17 ವರ್ಷ ಕಳೆದರೂ ಒಂದೇ ಒಂದು ಟ್ರೋಫಿ ಗೆದ್ದಿಲ್ಲ ಎಂದು ಟೀಕಿಸುತ್ತಿದ್ದ ಟೀಕಾಕಾರರ ಬಾಯಿ ಮುಚ್ಚಿಸಿದೆ. ಈ ಹೊತ್ತಿನಲ್ಲಿ ಆರ್ಸಿಬಿ ತಂಡವು 17 ವರ್ಷಗಳಲ್ಲಿ ಕಂಡ ಏಳುಬೀಳುಗಳನ್ನು ನೆನೆಯುವುದು ಅಗತ್ಯವಾಗಿದೆ.