ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಸೋನಿಪತ್ ಜಿಲ್ಲೆಯಿಂದ ಅಮನ್ ಎಂಬಾತನನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ಈ ಪ್ರಕರಣದಲ್ಲಿ ಈಗಾಗಲೇ ಬಂಧಿತನಾಗಿರುವ ಕುನಾಲ್ ಜಮಿನ್ಸಿಂಗ್ನ ಆಪ್ತನಾಗಿದ್ದ ಅಮನ್, ಶಸ್ತ್ರಾಸ್ತ್ರ ಖರೀದಿಗೆ ಸಂಬಂಧಿಸಿದ ಹಣಕಾಸಿನ ವಹಿವಾಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
🔎 ಬ್ಯಾಂಕ್ ಖಾತೆ ಮೂಲಕ ಹಣ ವರ್ಗಾವಣೆ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಪಂಡಿತ್ ಎಂಬಾತ ಅಮನ್ನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದ ಎನ್ನಲಾಗಿದೆ. ಬಳಿಕ ಅಮನ್ ಆ ಹಣವನ್ನು ಬ್ಯಾಂಕ್ನಿಂದ ಹಿಂಪಡೆದು ಕುನಾಲ್ ಜಮಿನ್ಸಿಂಗ್ಗೆ ನೀಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Tags:#TigerShroff #TigerShroffFiringCase #MumbaiCrime #AmanArrested #MumbaiPolice #ZiganaPistol #BollywoodNews #CrimeNews #KarunaduTimes #KannadaNews