ಶಿವಮೊಗ್ಗ: ಮಲೆನಾಡಿನ ಆಗುಂಬೆ ಸಮೀಪ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ MBBS ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ನೇಹಿತರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಸಂಭವಿಸಿದ ಈ ದುರ್ಘಟನೆ ಆತಂಕ ಮೂಡಿಸಿದೆ.
ರಾಯಚೂರು ಮೂಲದ ಡಾ. ಚೇತನ್ (28) ಮೃತ ದುರ್ದೈವಿ. ಇವರು ಶಿವಮೊಗ್ಗದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ MBBS ಹಾಗೂ MD ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಚೇತನ್ ಸೇರಿದಂತೆ ಐವರು ಸ್ನೇಹಿತರು ಶಿವಮೊಗ್ಗದಿಂದ ಮಂಗಳೂರಿನತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆಗುಂಬೆ ಸಮೀಪದ ಕವರಿಹಕ್ಲು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಡಾ. ಚೇತನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಉಳಿದ ನಾಲ್ವರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣವೇ ಮಣಿಪಾಲ್ನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಆಗುಂಬೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
ವೈದ್ಯಕೀಯ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಯುವ ವೈದ್ಯಕೀಯ ವಿದ್ಯಾರ್ಥಿಯ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಅಪಾರ ದುಃಖ ಮೂಡಿಸಿದೆ. ಸುರಕ್ಷಿತ ಪ್ರಯಾಣದ ಅಗತ್ಯವನ್ನು ಈ ದುರ್ಘಟನೆ ಮತ್ತೊಮ್ಮೆ ನೆನಪಿಸಿದೆ.
ವರದಿ: ನವೀನ್ ಕುಮಾರ್
---
🌐 ಇನ್ನಷ್ಟು ತಾಜಾ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ:
👉 www.karunaadutimes.com
📲 ಕರ್ನಾಟಕದ ಕ್ಷಣಕ್ಷಣದ ಸುದ್ದಿಗಳು, ಸ್ಥಳೀಯ ವಿದ್ಯಮಾನಗಳು ಹಾಗೂ ಬ್ರೇಕಿಂಗ್ ನ್ಯೂಸ್ಗಳಿಗಾಗಿ ಕರುನಾಡು ಟೈಮ್ಸ್ ಜೊತೆಗಿರಿ.
Tags:#Agumbe #AgumbeAccident #Shivamogga #Raichur #Mangalore #RoadAccident #MBBSStudent #ಕರ್ನಾಟಕಸುದ್ದಿ #ಆಗುಂಬೆ #ಶಿವಮೊಗ್ಗ #ರಾಯಚೂರು #ಕಾರುಅಪಘಾತ #ಅಪಘಾತಸುದ್ದಿ #ಕರುನಾಡುಟೈಮ್ಸ್