ರಾಮನಗರ: ನಗರದ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ಧ ರಾಮನಗರ ಟೌನ್ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ನಗರದ ಯಾರಬ್ ನಗರ, ಗೆಜ್ಜೆಲ ಗುಡ್ಡೆ, ಆಲದ ಮರ ಸರ್ಕಲ್, ವಿಜಯನಗರ ಐಜೂರು, ರುಕ್ಮಿಣಿ ಲೇಔಟ್ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ 43 ಮಂದಿಯನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ.
ಈ ವೇಳೆ ಸಂಬಂಧಪಟ್ಟವರ ವಿರುದ್ಧ ಡಿಡಿ ಪ್ರಕರಣ ಸೇರಿದಂತೆ ವಿವಿಧ ಲಘು ಪ್ರಕರಣಗಳನ್ನು ದಾಖಲಿಸಿ, ದಂಡ ವಿಧಿಸಲಾಗಿದೆ. ಅಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಅಶಾಂತಿ ಸೃಷ್ಟಿಸದಂತೆ ಎಚ್ಚರಿಕೆ ನೀಡಿ ಕಾನೂನು ಕ್ರಮ ಜರುಗಿಸಲಾಗಿದೆ.
🚔 ಸಾರ್ವಜನಿಕ ಶಾಂತಿ ಕಾಪಾಡಲು ಪೊಲೀಸ್ ಕ್ರಮ
ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಗಲಾಟೆ, ಅಸಭ್ಯ ವರ್ತನೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ನಿಗಾ ವಹಿಸಿದೆ.
ವರದಿ: ನವೀನ್ ಕುಮಾರ್
🌐 ಇನ್ನಷ್ಟು ರಾಮನಗರ ಜಿಲ್ಲೆಯ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ:
👉 www.karunaadutimes.com
📲 ಸುದ್ದಿಗಳನ್ನು ಓದಿ, ಹಂಚಿಕೊಳ್ಳಿ – ಸ್ಥಳೀಯ ಸುದ್ದಿಗಳಿಗಾಗಿ ಕರುನಾಡು ಟೈಮ್ಸ್ ಜೊತೆಗಿರಿ!