ಸ್ಕೂಟರ್ಗೆ ಸಾರಿಗೆ ಬಸ್ ಡಿಕ್ಕಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದುರ್ಮರಣ
ಮೈಸೂರು: ತಂದೆಯೊಂದಿಗೆ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ದಾರುಣವಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಎನ್ಆರ್ ಮೊಹಲ್ಲಾ ನಿವಾಸಿಗಳಾದ ವೆಂಕಟೇಶ್ ಮತ್ತು ಜ್ಯೋತಿ ದಂಪತಿಯ ಪುತ್ರಿ ವೈಷ್ಣವಿ (17) ಎಂದು ಗುರುತಿಸಲಾಗಿದೆ. ಈಕೆ ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
ಟ್ಯೂಷನ್ ಮುಗಿಸಿಕೊಂಡು ತಂದೆಯೊಂದಿಗೆ ಸ್ಕೂಟರ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ವೈಷ್ಣವಿ ಮೃತಪಟ್ಟಿದ್ದಾಳೆ.
ಮಗಳ ಸಾವಿನಿಂದ ಕುಟುಂಬದಲ್ಲಿ ದುಃಖ ಮಡುಗಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವಿದ್ಯಾರ್ಥಿನಿಯ ಅಕಾಲಿಕ ಸಾವು ಸ್ಥಳೀಯರಲ್ಲಿ ತೀವ್ರ ವಿಷಾದ ಮೂಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ: 0ನವೀನ್ ಕುಮಾರ್
Tags:#Mysuru #MysoreNews #RoadAccident #StudentDeath #BusAccident #ScooterAccident #ChamrajCircle #MysuruPalace #DevarajaPolice #KarnatakaNews #KannadaNews #KarunaaduTimes