ಬೆಂಗಳೂರು: ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರನ್ನು ಬಳಸಿಕೊಂಡು ಬಾಲಿವುಡ್ನ ಹಲವು ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ಟೆಕ್ಕಿಯೊಬ್ಬನನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.
ವೈಭವ್ ಮಿಶ್ರಾ ಬಂಧಿತ ಆರೋಪಿಯಾಗಿದ್ದಾನೆ. ನಟರಾದ ತುಷಾರ್ ಕಪೂರ್ ಮತ್ತು ಆಯುಷ್ಮಾನ್ ಖುರಾನಾ ಸೇರಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ.
ಅಲ್ಲದೆ, ಆಡಿಯೋ ಸಂದೇಶಗಳ ಮೂಲಕವೂ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ಸಂಬಂಧ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
SEO ಶೀರ್ಷಿಕೆ
ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ: ಬೆಂಗಳೂರಿನ ಟೆಕ್ಕಿ ವೈಭವ್ ಮಿಶ್ರಾ ಬಂಧನ
ವಿವರಣೆ
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ನಟರಾದ ತುಷಾರ್ ಕಪೂರ್, ಆಯುಷ್ಮಾನ್ ಖುರಾನಾ ಸೇರಿದಂತೆ ಹಲವು ಬಾಲಿವುಡ್ ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ಟೆಕ್ಕಿಯನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ.
Tags:Bishnoi Gang, Lawrence Bishnoi, Bengaluru Techie Arrest, Mumbai Crime Branch, Vaibhav Mishra, Tushar Kapoor, Ayushmann Khurrana, Bollywood News, Celebrity Threat, Karnataka News, Bengaluru News, Crime News, Karunaadu Times