ವಿಜಯಪುರ: ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆತಂದಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಭೀಕರ ಘಟನೆ ವಿಜಯಪುರ ನಗರದ ನೆಹರು ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ನಡೆದಿದೆ.
ಅಫಜಲಪುರ ತಾಲೂಕಿನ ಟಕ್ಕೆ ಗ್ರಾಮದ ಮೂಲದ ಯಾಸೀನ್ ಜುಬೇರಿ (34) ಕೊಲೆಯಾದ ವ್ಯಕ್ತಿ. ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಸಂದರ್ಭದಲ್ಲಿ ಹೊಂಚು ಹಾಕಿದ್ದ ದುಷ್ಕರ್ಮಿಗಳು ಏಕಾಏಕಿ ಯಾಸೀನ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದ್ದು, ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಯಾಸೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದಾಗಿ ಆಸ್ಪತ್ರೆ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಗಾಂಧಿಚೌಕ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
🔎 ಪೊಲೀಸರಿಂದ ತನಿಖೆ ಆರಂಭ
ಹತ್ಯೆಗೆ ನಿಖರ ಕಾರಣವೇನು? ದಾಳಿಯ ಹಿಂದೆ ಯಾರಿದ್ದಾರೆ? ಪೂರ್ವವೈರವೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ? ಎಂಬ ಹಲವು ಪ್ರಶ್ನೆಗಳು ಮೂಡಿವೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹತ್ಯೆಯ ಹಿಂದಿನ ಉದ್ದೇಶ ಮತ್ತು ಆರೋಪಿಗಳ ಕುರಿತು ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.
ವರದಿ: ನವೀನ್ ಕುಮಾರ್
🌐 ಇನ್ನಷ್ಟು ತಾಜಾ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ:
👉 www.karunaadutimes.com
Tags:#ವಿಜಯಪುರ #Vijayapura #VijayapuraNews #ಗುಂಡಿನದಾಳಿ #ಗುಂಡಿಕ್ಕಿಹತ್ಯೆ #ಯಾಸೀನ್ಜುಬೇರಿ #ಕೊಲೆಪ್ರಕರಣ #ಗರ್ಭಿಣಿಪತ್ನಿ #CrimeNews #KarnatakaCrime #KarnatakaNews #ವಿಜಯಪುರಕ್ರೈಂ #GandhiChowkPolice #BreakingNews #KannadaNews #KarunaaduTimes #ಕರ್ನಾಟಕಸುದ್ದಿ #ಕರ್ನಾಟಕಕ್ರೈಂ #ಕರ್ನಾಟಕಪೊಲೀಸ್ #LatestKannadaNews