ದಾವಣಗೆರೆ: ಪ್ರಯಾಣದ ಆತುರದಲ್ಲಿ ಬಸ್ನಲ್ಲೇ ಬಿಟ್ಟುಹೋಗಿದ್ದ ಸುಮಾರು ₹4 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಸುರಕ್ಷಿತವಾಗಿ ವಾರಸುದಾರರಿಗೆ ತಲುಪಿಸುವ ಮೂಲಕ ಕೆಎಸ್ಆರ್ಟಿಸಿ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. 👏
ಚಿತ್ರದುರ್ಗದಿಂದ ದಾವಣಗೆರೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ಬ್ಯಾಗ್ ಅನ್ನು ಮರೆತು ಬಿಟ್ಟುಹೋಗಿದ್ದರು. ಬ್ಯಾಗ್ನಲ್ಲಿ ಬೆಲೆಬಾಳುವ ಚಿನ್ನಾಭರಣ ಇರುವುದನ್ನು ಗಮನಿಸಿದ ಬಸ್ ಚಾಲಕ ಮಂಜುನಾಥ್ ಅವರು ಅದನ್ನು ಡಿಪೋ ವ್ಯವಸ್ಥಾಪಕ ಸಿದ್ದೇಶ್ ಸಿದ್ದನಮಠ ಅವರಿಗೆ ಹಸ್ತಾಂತರಿಸಿದ್ದಾರೆ.
ಬಳಿಕ ಬ್ಯಾಗ್ ಪರಿಶೀಲಿಸಿದಾಗ ಒಂದು ಮಾಂಗಲ್ಯ ಸರ, ಎರಡು ಕಿವಿಯೋಲೆಗಳು ಹಾಗೂ ಮೊಬೈಲ್ ಸಂಖ್ಯೆ ಪತ್ತೆಯಾಗಿದೆ. ಆ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ, ಚನ್ನಗಿರಿ ತಾಲೂಕಿನ ಚಿರಡೋಣಿಗೆ ತೆರಳುತ್ತಿದ್ದ ಚಿತ್ರದುರ್ಗ ಮೂಲದ ಲಕ್ಷ್ಮಿ ಎಂಬ ಮಹಿಳೆಗೆ ಸೇರಿದ ಬ್ಯಾಗ್ ಎಂಬುದು ತಿಳಿದುಬಂದಿದೆ.
ನಂತರ ಮಹಿಳೆಯನ್ನು ಕಚೇರಿಗೆ ಕರೆಸಿಕೊಂಡ ಅಧಿಕಾರಿಗಳು, ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ಸುರಕ್ಷಿತವಾಗಿ ಹಸ್ತಾಂತರಿಸಿದ್ದಾರೆ.
💐 ಪ್ರಾಮಾಣಿಕತೆಗೆ ಬೆಲೆ ಕಟ್ಟಲಾಗದು!
ಹಣದ ಆಸೆಗಿಂತ ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಿದ ಚಾಲಕ ಮಂಜುನಾಥ್ ಅವರ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಪ್ರಾಮಾಣಿಕ ವ್ಯಕ್ತಿಗಳಿಗೆ ನಮ್ಮದೊಂದು ಸಲಾಂ! 🙏
ವರದಿ: ನವೀನ್ ಕುಮಾರ್
🌐 ಇನ್ನಷ್ಟು ಸುದ್ದಿಗಳಿಗಾಗಿ ಭೇಟಿ ನೀಡಿ:
www.karunaadutimes.com
ಕರುನಾಡು ಟೈಮ್ಸ್ – ನಿಮ್ಮ ನಾಡಿನ ನೈಜ ಸುದ್ದಿಗಳಿಗಾಗಿ.