ನೆಲಮಂಗಲ: ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ನೆಲಮಂಗಲ ಉಪವಿಭಾಗದ ಪೊಲೀಸರು, ಬರೋಬ್ಬರಿ 73 ಜಾನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಡಾಬಸ್ಪೇಟೆ ಸಮೀಪದ ಕೂತಗಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಳೆದ ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಡಿವೈಎಸ್ಪಿ ಉಮಾರಾಣಿ ಅವರ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ನಡೆಸಿದೆ. ಈ ವೇಳೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 70 ಎಮ್ಮೆಗಳು ಹಾಗೂ 3 ಹಸುಗಳನ್ನು ಪೊಲೀಸರು ರಕ್ಷಿಸಿದ್ದಾರೆ.
ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಡಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮಧ್ಯರಾತ್ರಿ ನಡೆದ ಈ ಪೊಲೀಸ್ ಕಾರ್ಯಾಚರಣೆಯಿಂದ ಅಕ್ರಮ ಜಾನುವಾರು ಸಾಗಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಂತಾಗಿದೆ.
📍 ಘಟನೆ ಸ್ಥಳ: ಕೂತಗಟ್ಟ ಗ್ರಾಮ, ಡಾಬಸ್ಪೇಟೆ ಸಮೀಪ, ನೆಲಮಂಗಲ ತಾಲೂಕು.
📰 ವರದಿ: ನವೀನ್ ಕುಮಾರ್
KARUNAADU TIMES
🌐 www.karunaadutimes.com
📲 ನಾಡಿನ ತಾಜಾ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ.