ಚಿಕ್ಕಮಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಸಂಬಂಧಿಕರ ಮನೆಗೆ ತೆರಳುತ್ತಿದ್ದ ತಂದೆ-ಮಗಳಿಗೆ ವಿಧಿಯಾಟ ಕಾದಿತ್ತು. ಅವರು ಪ್ರಯಾಣಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಕ್ರಾಸ್ ಬಳಿ ನಡೆದಿದೆ.
ಈ ಅಪಘಾತದಲ್ಲಿ ಶಾಂತಿನಗರ ನಿವಾಸಿ ದ್ರಾಕ್ಷಾಯಿಣಿ (20) ಮೃತಪಟ್ಟ ಯುವತಿ. ಬೈಕ್ ಚಲಾಯಿಸುತ್ತಿದ್ದ ಅವರ ತಂದೆ ರಮೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಂದೆ ಮತ್ತು ಮಗಳು ಶಾಂತಿನಗರದಿಂದ ಎಂ.ಸಿ.ಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ದೀಪಾವಳಿ ಹಬ್ಬ ಆಚರಿಸಲು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಭೈರಾಪುರ ಕ್ರಾಸ್ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ದ್ರಾಕ್ಷಾಯಿಣಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ರಮೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಹಬ್ಬದ ಸಂಭ್ರಮಕ್ಕಾಗಿ ಹೊರಟಿದ್ದ ಕುಟುಂಬದಲ್ಲಿ ಈ ದುರಂತ ಸಂಭವಿಸಿರುವುದು ಸ್ಥಳೀಯರಲ್ಲಿ ದುಃಖ ಮೂಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ನವೀನ್ ಕುಮಾರ್
---
🌐 ಇಂತಹ ಮತ್ತಷ್ಟು ಕ್ಷಣಕ್ಷಣದ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ.
🔗 www.karunaadutimes.com
📲 ಸುದ್ದಿ ಓದಿ | ಹಂಚಿಕೊಳ್ಳಿ | ಸತ್ಯಾಸತ್ಯತೆಯ ಸುದ್ದಿಗಳೊಂದಿಗೆ ನಮ್ಮೊಂದಿಗೆ ಇರಿ.
Tags:#KarunaaduTimes #Chikkamagaluru #Tarikere #BhairapuraCross #Lingadahalli #RoadAccident #BikeAccident #DeepavaliAccident #KarnatakaNews #ChikkamagaluruNews #AccidentNews #KannadaNews #ಕರ್ನಾಟಕಸುದ್ದಿ #ಚಿಕ್ಕಮಗಳೂರು #ತರೀಕೆರೆ #ಬೈಕ್ಅಪಘಾತ #ರಸ್ತೆಅಪಘಾತ #ದೀಪಾವಳಿ #ಕರುನಾಡುಟೈಮ್ಸ್