ಮೈಸೂರು: ಜಾತ್ರೆಯ ಸಂಭ್ರಮದ ನಡುವೆ ಕಲ್ಲು ತೂರಾಟದ ಘಟನೆ ಆತಂಕ ಸೃಷ್ಟಿಸಿದೆ. ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಜಾತ್ರೆಯ ಸಂದರ್ಭದಲ್ಲಿ ಪಟಾಕಿ ಸಿಡಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ, ಬಳಿಕ ವಿಕೋಪಕ್ಕೆ ತಿರುಗಿದೆ. ಎರಡೂ ಗುಂಪುಗಳ ನಡುವೆ ನಡೆದ ಕಲ್ಲು ತೂರಾಟದಲ್ಲಿ ಆನಂದ್, ಭರತ್, ಅಭಿ ಸೇರಿದಂತೆ ಒಂದು ಮಗು ಗಾಯಗೊಂಡಿದೆ. ಗಾಯಾಳುಗಳನ್ನು ತಗಡೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆಯಿಂದಾಗಿ ಬೆಟ್ಟದಿಂದ ಆಗಮಿಸುತ್ತಿದ್ದ ಸಿದ್ದೇಶ್ವರ ಸ್ವಾಮಿಯ ರಥೋತ್ಸವವನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿದೆ. ಜಾತ್ರೆಯ ಮೆರವಣಿಗೆ ವೇಳೆ ಸೂಕ್ತ ಪೊಲೀಸ್ ಭದ್ರತೆ ಇರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಘಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು, ಸ್ಥಳಕ್ಕೆ ತಹಶೀಲ್ದಾರ್ ಆಗಮಿಸಿ ಸಮಸ್ಯೆಗೆ ಪರಿಹಾರ ನೀಡಬೇಕು. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳ ಅಗತ್ಯ ಎದುರಾಗಿದೆ. ಧಾರ್ಮಿಕ ಸಂಭ್ರಮದ ಸಂದರ್ಭದಲ್ಲಿ ನಡೆದ ಈ ಘರ್ಷಣೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ವರದಿ: ನವೀನ್ ಕುಮಾರ್
🌐 ಇನ್ನಷ್ಟು ಕ್ಷಣಕ್ಷಣದ ಸುದ್ದಿಗಳಿಗಾಗಿ ಭೇಟಿ ನೀಡಿ:
www.karunaadutimes.com
🔔 ಕರ್ನಾಟಕದ ಸಮಗ್ರ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ.