ಬೆಂಗಳೂರು: ಮಹಿಳೆಯರ ಸುರಕ್ಷತೆ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ, ಸಾರ್ವಜನಿಕ ಸಾರಿಗೆ ಸೇವೆಗಳಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವ ಘಟನೆಗಳು ಆತಂಕ ಮೂಡಿಸುತ್ತಿವೆ. ಇದೀಗ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸವಾರನೊಬ್ಬ ಯುವತಿಗೆ ಅಸಭ್ಯವಾಗಿ ಮಾತನಾಡಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಯಲಹಂಕದ ಜ್ಯುಡಿಷಿಯಲ್ ಲೇಔಟ್ನಿಂದ ಯುವತಿಯೊಬ್ಬರು ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದರು. ಆದರೆ, ಬುಕ್ ಮಾಡಿದ ಸ್ಥಳಕ್ಕೆ ಬಂದಿದ್ದ ಸವಾರ ಯುವತಿಗೆ ಕರೆ ಮಾಡದೆ, ಯಾವುದೇ ಸಂದೇಶವನ್ನೂ ಕಳುಹಿಸದೆ ಅಲ್ಲಿಂದ ವಾಪಸ್ಸಾಗಿದ್ದಾನೆ ಎನ್ನಲಾಗಿದೆ.
ಈ ವಿಚಾರ ತಿಳಿದ ಯುವತಿ ಸವಾರನಿಗೆ ಕರೆ ಮಾಡಿ ಪ್ರಶ್ನಿಸಿದ್ದಾರೆ. ಈ ವೇಳೆ ಸವಾರ, "ಮೇಡಂ, ಸೆಕ್ಸ್ ಅವೈಲೆಬಲ್ ಇದ್ಯಾ?" ಎಂದು ಅಸಭ್ಯವಾಗಿ ಪ್ರಶ್ನಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.
ಸವಾರನ ಈ ವರ್ತನೆಯಿಂದ ಆಕ್ರೋಶಗೊಂಡ ಯುವತಿ, ನಡೆದ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಹಂಚಿಕೊಂಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇಂತಹವರ ವರ್ತನೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವ ಇತರ ಚಾಲಕರಿಗೂ ಕೆಟ್ಟ ಹೆಸರು ಬರುತ್ತದೆ ಎಂದು ಬೇಸರ ಹೊರಹಾಕಿದ್ದಾರೆ.
ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಯುವತಿಯರು ಬೈಕ್ ಟ್ಯಾಕ್ಸಿ ಬುಕ್ ಮಾಡುವಾಗ ಎಚ್ಚರಿಕೆ ವಹಿಸಬೇಕು. ಚಾಲಕರ ವಿವರಗಳನ್ನು ಪರಿಶೀಲಿಸಿಕೊಂಡೇ ಪ್ರಯಾಣಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಾರ್ವಜನಿಕ ಸಾರಿಗೆ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಅತ್ಯಂತ ಮುಖ್ಯ. ಗ್ರಾಹಕರ ವಿಶ್ವಾಸದ ಮೇಲೆ ನಡೆಯುವ ಸೇವೆಗಳಲ್ಲಿ ಇಂತಹ ಅಸಭ್ಯ ವರ್ತನೆಗೆ ಅವಕಾಶವಿರಬಾರದು. ಯುವತಿಯ ಆರೋಪದ ಕುರಿತು ಸಂಬಂಧಪಟ್ಟ ಸಂಸ್ಥೆ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
ವರದಿ: ನವೀನ್ ಕುಮಾರ್
🌐 ಇನ್ನಷ್ಟು ಸುದ್ದಿಗಳಿಗಾಗಿ ಭೇಟಿ ನೀಡಿ:
www.karunaadutimes.com
📲 ಕರ್ನಾಟಕದ ಕ್ಷಣಕ್ಷಣದ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟ್ ವೀಕ್ಷಿಸಿ ಹಾಗೂ ಸುದ್ದಿಗಳನ್ನು ಶೇರ್ ಮಾಡಿ.
Tags:#Bengaluru #BikeTaxi #WomenSafety #Yelahanka #BengaluruNews #KarnatakaNews #BikeTaxiHarassment #KarunaaduTimes #ಬೆಂಗಳೂರು #ಮಹಿಳೆಯರಸುರಕ್ಷತೆ #ಯಲಹಂಕ #ಕರ್ನಾಟಕಸುದ್ದಿ