ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿರುದ್ಧ ಕೇಳಿಬಂದಿದ್ದ 9 ಕೋಟಿ ರೂಪಾಯಿ ಆರೋಪಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆ ಇಂದು ಮಹತ್ವದ ಹಂತ ತಲುಪಿದೆ. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಸುದೀಪ್ ಇಂದು ಬೆಂಗಳೂರಿನ ಎಸಿಜೆಎಂ (ACJM) ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
2023ರಲ್ಲಿ ನಿರ್ಮಾಪಕರಾದ ಎಂ.ಎನ್. ಕುಮಾರ್ ಮತ್ತು ಎಂ.ಎನ್. ಸುರೇಶ್ ಅವರು, ಸಿನಿಮಾ ಕಾಲ್ಶೀಟ್ ನೀಡುವುದಾಗಿ ಹೇಳಿ ಸುದೀಪ್ 9 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಆರೋಪಿಸಿದ್ದರು. ಈ ಹೇಳಿಕೆಗಳು ತಮ್ಮ ಗೌರವ, ವೃತ್ತಿಜೀವನ ಮತ್ತು ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಆರೋಪಿಸಿ, ಸುದೀಪ್ ಇಬ್ಬರು ನಿರ್ಮಾಪಕರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಪ್ರಸ್ತುತ ಪ್ರಕರಣ ಸಾಕ್ಷ್ಯಾಧಾರಗಳ ಹಂತದಲ್ಲಿದ್ದು, ಇಂದು ನಿರ್ಮಾಪಕರ ಪರ ವಕೀಲರು ಸುದೀಪ್ ಅವರ ಕ್ರಾಸ್ ಎಕ್ಸಾಮಿನೇಷನ್ ನಡೆಸಲಿದ್ದಾರೆ. ಈ ಹಿಂದೆ ನ್ಯಾಯಾಲಯಕ್ಕೆ ಹಾಜರಾಗಿ ಸುದೀಪ್ ತಮ್ಮ ಹೇಳಿಕೆ ದಾಖಲಿಸಿದ್ದರು.
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣದ ಇಂದಿನ ವಿಚಾರಣೆಯ ಮೇಲೆ ಸಿನಿರಂಗ ಹಾಗೂ ಅಭಿಮಾನಿಗಳ ಕಣ್ಣಿದೆ. ಇಂದಿನ ವಿಚಾರಣೆಯಲ್ಲಿ ಹೊರಬರುವ ಮಾಹಿತಿಗಳು ಪ್ರಕರಣದ ಮುಂದಿನ ಹಾದಿಗೆ ಮಹತ್ವದ ತಿರುವು ನೀಡುವ ಸಾಧ್ಯತೆ ಇದೆ.
Tags:
#KichchaSudeep #Sudeep #DefamationCase #Sandalwood #KannadaCinema #BengaluruCourt #CinemaNews #BreakingNews #KarunaadaTimes #KarnatakaNews #ActorSudeep #CourtUpdate #KannadaNews #MNKumar #MNSuresh